‘ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ’

‘ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ’

ಕೊಪ್ಪಳ; ಬದುಕಿನಲ್ಲಿ ಪಠ್ಯಗಳಿಗೆ ಕೊಡುವಷ್ಟೇ ಮಹತ್ವ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರಸ್ವತಿ ವಿದ್ಯಾಮಂದಿರ ಪ್ರೌಢಶಾಲೆಯ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವ ವಲಯ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಸಿ ಮಾತನಾಡಿದರು.

ಕ್ರೀಡೆ ಮನುಷ್ಯನ ಅವಿಭಾಜ್ಯ ಅಂಗವಾಗಬೇಕು. ಕ್ರೀಡೆ ಸದೃಢ ದೇಹವನ್ನು ನಿರ್ಮಿಸುವುದಷ್ಟೇ ಅಲ್ಲದೆ ಸದಢ ಮನಸ್ಸಿನ ನಿರ್ಮಾಣಕ್ಕೂ ಕಾರಣವಾಗುತ್ತದೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ನಿರಂತರವಾಗಿ ನಡೆಯಬೇಕು. ಕ್ರೀಡಾಕೂಟಕ್ಕೆ ಅಗತ್ಯ ಸೌಲಭ್ಯ ಒದಗಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ವಕೀಲ ರಾಘವೇಂದ್ರ ಪಾನಘಂಟಿ, ಜಯ ಕರ್ನಾಟಕ ಸಂಘಟನೆಯ ಉತ್ತರ ಕರ್ನಾಟಕ ಕಾರ್ಯಾಧ್ಯಕ್ಷ ವಿಜಯ ಕವಲೂರ, ಮುಖಂಡರಾದ ಪತ್ರೆಪ್ಪ ಪಲ್ಲೇದ, ಮಲ್ಲಪ್ಪ ಕವಲೂರ, ಪ್ರಭು ಹಿರೇಮಠ, ಆರ್.ಎಚ್.ಅತ್ತನೂರ ಇದ್ದರು. ರೇಣುಕಾ ಅತ್ತನೂರು ನಿರ್ವಹಿಸಿದರು

https://vijaykarnataka.indiatimes.com/district/koppala/-/articleshow/41610940.cms

Leave a Reply

Your email address will not be published. Required fields are marked *

*

Scroll To Top

Share this