ಪಥಸಂಚಲನ : ಸರಸ್ವತಿ ವಿದ್ಯಾಮಂದಿರ ಶಾಲೆಗೆ ದ್ವಿತೀಯ ಬಹುಮಾನ

ಪಥಸಂಚಲನ : ಸರಸ್ವತಿ ವಿದ್ಯಾಮಂದಿರ ಶಾಲೆಗೆ ದ್ವಿತೀಯ ಬಹುಮಾನ

ಕೊಪ್ಪಳ: ೬೧ನೇ ರಾಜ್ಯೋತ್ಸವ ನಿಮಿತ್ಯ ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಥಸಂಚಲನ ಕಾರ‍್ಯಕ್ರಮದಲ್ಲಿ ಸರಸ್ವತಿ ವಿದ್ಯಾಮಂದಿರ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ಆಕರ್ಷಕವಾಗಿ ಪಥಸಂಚಲನದಲ್ಲಿ ಭಾಗವಹಿಸಿದ್ದರು. ಗೈಡ್ಸ್ ಕ್ಯಾಪ್ಟನ್ ಫಿರೋಜ್ ನೇತೃತ್ವದ ತಂಡಕ್ಕೆ ಬಹುಮಾನ ಲಭಿಸಿದೆ.

ಪಥಸಂಚಲನದ ನಂತರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರಡ್ಡಿ ಬಹುಮಾನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಬಿ.ನಾಗರಳ್ಳಿ , ಜಿಲ್ಲಾಧಿಕಾರಿ ಎಂ.ಕನಗವಲ್ಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ತ್ಯಾಗರಾಜನ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ಸರಸ್ವತಿ ವಿದ್ಯಾಮಂದಿರದ ವಿದ್ಯಾರ್ಥಿಗಳು ಸತತವಾಗಿ ಪಥಸಂಚಲನದಲ್ಲಿ ಬಹುಮಾನ ಪಡೆಯುತ್ತಲೇ ಬಂದಿದ್ಧಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಆರ್.ಎಚ್.ಅತ್ತನೂರ, ಮುಖ್ಯೋಪಾದ್ಯಾಯನಿ ಶ್ರೀಮತಿ ರೇಣುಕಾ ಅತ್ತನೂರ ಸೇರಿದಂತೆ ಶಿಕ್ಷಕರು ಹಾಗೂ ಪಾಲಕರು ಅಭಿನಂದನೆಗಳನ್ನು ಸಲ್ಲಿಸಿದ್ಧಾರೆ.

Leave a Reply

Your email address will not be published. Required fields are marked *

*

Scroll To Top

Share this